ಚಿಕ್ಕಮಗಳೂರು: ಜೂ.೩೦ರಂದು ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪಟ್ಟಣದ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ.
ಕೊಪ್ಪದಲ್ಲಿರುವ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ಈ ಹಿಂದೆಯೂ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಅದೇ ಜಾಗದಲ್ಲಿ ಅದೇ ಶೈಲಿಯಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ನಡೆಸಿದ ತನಿಖೆಯಲ್ಲಿ ಲೋಪವಿದೆ ಹಾಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿ ಇಂದು ಕೊಪ್ಪ ಪಟ್ಟಣ ಬಂದ್‌ಗೆ ಕರೆ ನೀಡಿದೆ.