ಸುದ್ದಿ

ನೇಪಾಳದಲ್ಲಿ ಅರಾಜಕತೆ: ಭಾರತೀಯರ ರಕ್ಷಣೆಗೆ ವಿಮಾನ ಸೇವೆ ಆರಂಭ

Share It

ನವದೆಹಲಿ: ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.

ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಕಂಠ್ಮಡು ಸೇರಿ ಹಲವೆಡೆ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ್ ಮಾಡಲಾಗಿತ್ತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ವಿಮಾನ ನಿಲ್ದಾಣ ಮತ್ತೆ ಕಾರ್ಯಾರಂಭಿಸಿದೆ.

ನೇಪಾಳದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಇಂದು ಮತ್ತು ನಾಳೆ ದೆಹಲಿಯಿಂದ ಕಟ್ಮಂಡುವಿಗೆ ತೆರಳಲು ಮತ್ತು ಹಿಂತಿರುಗಲು ವಿಶೇಷ ವಿಮಾನಗಳು ಕಾರ್ಯ ನಿರ್ವಹಿಸಲಿವೆ ಎಂದು ಏರ್ ಇಂಡಿಯಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ನವದೆಹಲಿ ಮತ್ತು ಕಟ್ಮಂಡು ನಡುವೆ ಪ್ರತಿದಿನ 12 ವಿಮಾನಗಳನ್ನು ನಿರ್ವಹಿಸುವ ಏರ್ ಇಂಡಿಯಾ, ಮಂಗಳವಾರ ನಾಲ್ಕು ವಿಮಾನಗಳ ಹಾರಾಟ ರದ್ದುಗೊಳಿಸಿತ್ತು. ಜತೆಗೆ, ಏರ್ ಇಂಡಿಯಾ ಎಕ್ಸ್ಪ್ರೆಸ್, ಇಂಡಿಗೊ, ಸ್ಪೇಸ್‌ಜೆಟ್ ಸೇರಿ ನೇಪಾಳ ಏರ್‌ಲೈನ್ಸ್ ಸಂಸ್ಥೆಗಳು ಕೂಡ ವಿಮಾನ ಹಾರಾಟ ರದ್ದುಗೊಳಿಸಿದ್ದವು.


Share It

You cannot copy content of this page