ರಾಯಚೂರು: ಒಂದೇ ಊರಿನ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟು ಇಬ್ಬರು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಕ್ವಾರಿಯರದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
೧೮ ವರ್ಷದ ರೇಣುಕಾ ಮೃತಪಟ್ಟಿದ್ದರೆ, ತಿಮ್ಮಕ್ಕ ಹಾಗೂ ಮತ್ತೊಬ್ಬ ಅಪ್ರಾಪ್ತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಈ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ ಎಂಬುದೇ ನಿಗೂಢವಾಗಿತ್ತು. ಸಂಚಲನ ಸೃಷ್ಟಿಸಿದ್ದ, ಪ್ರಕರಣಕ್ಕೆ ಇದೀಗ ಪೊಲೀಸ್ ತನಿಖೆ ವೇಳೆ ದೊಡ್ಡ ತಿರುವು ದೊರೆತಿದೆ.
ದೇವದುರ್ಗ ಪೊಲೀಸರ ತನಿಖೆ ವೇಳೆ ದುರಂತದ ಹಿಂದಿನ ಲವ್ ಸ್ಟೋರಿ ಬಯಲಾಗಿದೆ. ಪ್ರೇಮ ಪ್ರಕರಣವೇ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಲು ಕಾರಣವಾಗಿದೆ.
ಕಾರಣ: ಆತ್ಮಹತ್ಯೆಗೆ ಯತ್ನಿಸಿದ್ದ ಮೂವರ ಹಿಂದೆ ಒಂದೊAದು ಲವ್ ಸ್ಟೋರಿ ಇತ್ತು. ಮೃತ ರೇಣುಕಾ, ತಿಮ್ಮಕ್ಕ ಹಾಗೂ ಅಪ್ರಾಪ್ತೆ ಮೂವರೂ ಸಂಬAಧಿಕರು. ಮೂವರು ಓಬ್ಬೊಬ್ಬ ಯುವಕನ ಜೊತೆ ಪ್ರಣಯದಲ್ಲಿದ್ದರು. ಈ ಮಧ್ಯೆ ರೇಣುಕಾಗೆ ಬೇರೋಬ್ಬ ಯುವಕನ ಜೊತೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಇನ್ನೊಂದು ವಾರದಲ್ಲಿ ನಿಶ್ಚಿತಾರ್ಥವಿತ್ತು. ಹೀಗಾಗಿ ರೇಣುಕಾ ಒಳಗೊಳಗೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಒಂದು ವೇಳೆ, ಈ ಬಗ್ಗೆ ಹಿರಿಯರು ಪ್ರಶ್ನೆ ಮಾಡಿದರೆ ಮೂವರ ಪ್ರೇಮ ಪ್ರಕರಣವೂ ಬಯಲಾಗತ್ತದೆ ಎಂದು ಆತಂಕಗೊAಡಿದ್ದರು.
ಹೀಗಾಗಿ ಕಳೆದ ವಾರ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಿದ್ದರು. ಈ ಮಧ್ಯೆ, ಭಾನುವಾರ ತಿಮ್ಮಕ್ಕನ ಹೊಲಕ್ಕೆ ತಿಮ್ಮಕ್ಕ, ರೇಣುಕಾ ಹಾಗೂ ಆಪ್ರಾಪ್ತೆ ಕೆಲಸಕ್ಕೆ ಹೋಗಿದ್ದರು. ಆ ಸಂದರ್ಭದಲ್ಲಿ ತಿಮ್ಮಕ್ಕ ಕ್ರಿಮಿನಾಶಕ ಸೇವಿಸಿದ್ದಳು. ಬಳಿಕ ರೇಣುಕಾ ಮತ್ತು ಅಪ್ರಾಪ್ತೆ ಕೂಡ ಅದೇ ಕ್ರಿಮಿನಾಶಕ ಸೇವಿಸಿದ್ದಾಳೆ. ಆಗ ತಿಮ್ಮಕ್ಕ ಒದ್ದಾಡಲು ಶುರು ಮಾಡಿದಳು. ಇದೇ ವೇಳೆ ತಿಮ್ಮಕ್ಕ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ರೇಣುಕಾ ಹಾಗೂ ಅಪ್ರಾಪ್ತೆ ಭಯಭೀತರಾಗಿ ತಿಮ್ಮಕ್ಕನ ಹೊಲದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಗ ಸ್ಥಳೀಯರು ಧಾವಿಸಿ, ಅಪ್ರಾಪ್ತೆಯನ್ನು ಬದುಕಿಸಿದ್ದರೆ ರೇಣುಕಾ ಸಾವನ್ನಪ್ಪಿದ್ದಳು.
ಮಗಳ ಸಾವಿನ ಬಗ್ಗೆ ಕುಟುಂಬಸ್ಥರು, ತಿಮ್ಮಕ್ಕ ಮತ್ತು ಅಪ್ರಾಪ್ತೆ ಮೇಲೆ ಅನುಮಾನವಿದೆ ಎಂದು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸದ್ಯ ದೇವದುರ್ಗ ಠಾಣೆಯಲ್ಲಿ ಘಟನೆ ಸಂಬAಧ ಯುಡಿಆರ್ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತ ವಿಷ ಸೇವಿಸಿದ್ದ ತಿಮ್ಮಕ್ಕಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪ್ರಾಪ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ: ಒಬ್ಬರ ಸಾವು
