ಸುದ್ದಿ

ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Share It

ಬೆಂಗಳೂರು : ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.
ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.
ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು.
ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಅನೇಕ ನಾಯಕರು ಟೀಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.


Share It

You cannot copy content of this page