ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚಕರು ವಂಚನೆ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದೆ.
ಸೈಬರ್ ವಂಚಕರು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿ ಸುಧಾಮೂರ್ತಿಗೆ ಯಾಮಾರಿಸಲು ಯತ್ನಿಸಿ ವಿಫಲವಾಗಿದ್ದಾರೆ.
ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಸೆ.೫ ರಂದು ಸುಧಾಮೂರ್ತಿ ಅವರಿಗೆ ಕರೆ ಮಾಡಿ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ.
ಹಾಗಾಗಿ ವ್ಯೆಯಕ್ತಿಕ ಮಾಹಿತಿ ನೀಡಿ ಎಂದು ಮಾಹಿತಿ ಕೇಳಿದ್ದ. ಅಲ್ಲದೇ ನಿಮ್ಮ ನಂಬರ್ನಿಂದ ಅಶ್ಲೀಲ ವೀಡಿಯೋ ಕಳಿಸಲಾಗುತ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದ. ಈ ವೇಳೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆ ಬಂದಿದ್ದ ನಂಬರ್ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ್ದು, ಟ್ರೂಕಾಲರ್ನಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ಬಂದಿತ್ತು.
ಇದರಿಂದ ಎಚ್ಚೆತ್ತುಕೊಂಡ ಅವರು ಸೈಬರ್ ವಂಚಕರ ಟ್ರಾö್ಯಪ್ಗೆ ಒಳಗಾಗದೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ವಂಚಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.
ಸುಧಾಮೂರ್ತಿ ಅವರು ಯಾವುದೇ ಹಣವನ್ನು ಸೈಬರ್ ವಂಚಕರಿಗೆ ನೀಡಿಲ್ಲ. ತಮಗೆ ವಂಚನೆ ಮಾಡುತ್ತಿದ್ದಾರೆ ಎಂದು ಅರಿತುಕೊಂಡು ತಕ್ಷಣವೇ ಎಚ್ಚೆತ್ತುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬAಧ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.