ಅಪರಾಧ ಸುದ್ದಿ

PES​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ

Share It

ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ

ಬೆಂಗಳೂರು: ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಐಟಿ ದಾಳಿ ಮಾಡಿದ್ದಾರೆ.

ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹನುಮಂತನಗರ ಸೇರಿದಂತೆ ಕೆಲ ಕಡೆಗಳ ದಾಳಿ ನಡೆದಿದಿದ್ದು, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಹೊರ ರಾಜ್ಯಗಳ ಶಾಖೆ ಮೇಲೂ ದಾಳಿ: ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜ್, ಹನುಮಂತನಗರ ಕಾಲೇಜ್, ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆದಿದೆ.
ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ಮನೆ ಮೇಲೂ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ದೊರೆಸ್ವಾಮಿ ಸಂಬAಧಿಕರ ಮನೆ ಮೇಲೂ ರೇಡ್ ಆಗಿದೆ ಎಂದು ತಿಳಿದು ಬಂದಿದೆ.
೧೦೦ ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ: ಚೆನ್ನೈ , ಮಂಗಳೂರು, ಆಂಧ್ರದಿAದ ಬಂದಿರೋ ಸುಮಾರು ೧೦೦ ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದಾಯಕ್ಕೆ ಮೀರಿದ ಆಸ್ತಿಗಳಿಕೆ ಆರೋಪ ಹಾಗೂ ತೆರಿಗೆ ವಂಚನೆ ಮಾಡಿರೋ ಆರೋಪ ಹಿನ್ನಲೆ ದಾಳಿ ನಡೆದಿದೆ ಎನ್ನಲಾಗ್ತಿದೆ.
ದೊರೆಸ್ವಾಮಿ ಪುತ್ರನ ವಿಚಾರಣೆ ಸಾಧ್ಯತೆ
ಸದ್ಯ ಪಿಇಎಸ್ ಶಿಕ್ಷಣ ಸಂಸ್ಥೆಗಳನ್ನ ದೊರೆಸ್ವಾಮಿ ಪುತ್ರ ಜವಹರ್ ದೊರೆಸ್ವಾಮಿ ನೋಡಿಕೊಳ್ಳುತ್ತಿದ್ದಾರೆ. ಕಾಲೇಜಿನ ಹಣಕಾಸು ಲೆಕ್ಕ, ಪೀಠೋಪಕರಣಗಳ ಖರೀದಿ ಹಾಗೂ ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಖರ್ಚು ಮಾಡಿರುವ ಹಣದ ಬಗ್ಗೆ ವಿವರಣೆಗಳನ್ನ ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ. ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಮಾಹಿತಿಯನ್ನ ಕೂಡ ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ.


Share It

You cannot copy content of this page