ಅಪರಾಧ ಸುದ್ದಿ

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ

Share It

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ

ಶಿವಮೊಗ್ಗ: ಭದ್ರಾ ಕಾಲುವೆಗೆ ಪ್ರೇಯಸಿಯ ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ.

ಪ್ರೇಯಸಿ ಸ್ವಾತಿಯನ್ನು ಸೂರ್ಯ ಕೊಲೆ ಮಾಡಿ, ಕೊಲೆ ಬಳಿಕ ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಹೈಡ್ರಾಮ ಮಾಡಿದ್ದ. ಸದ್ಯ ಸೂರ್ಯ ಮತ್ತು ಆತನ ತಂದೆ ಸ್ವಾಮಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಸೂರ್ಯ ಮತ್ತು ಸ್ವಾತಿ ಇಬ್ಬರು ಪ್ರೀತಿಸುತ್ತಿದ್ದರು. ಸ್ವಾತಿ ಪದವಿ ಎರಡನೇ ವರ್ಷ ವ್ಯಾಸಾಂಗ ಮಾಡುತ್ತಿದ್ದಳು. ಸೂರ್ಯ ಮದುವೆ ಆಗುವುದಕ್ಕೆ ಪೀಡಿಸುತ್ತಿದ್ದ. ಆದರೆ ಇತ್ತ ಸ್ವಾತಿ ಮನೆಯವರು ಓದು ಮುಗಿಯುವವರೆಗೆ ಮದುವೆ ಬೇಡ ಅಂದಿದ್ದಾರೆ. ಸೆ. ೨೧ ರಂದು ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿತ್ತು.

ಸೆ.೨೧ರಂದು ಸ್ವಾತಿಯನ್ನು ಸೂರ್ಯ ಮನೆಯಿಂದ ಭದ್ರಾ ಕಾಲುವೆಗೆ ಕರೆದೊಯ್ದು ಅಲ್ಲಿಂದ ತಳ್ಳಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಮಂಗಳವಾರ ಸಂಜೆ ಯುವತಿಯ ಶವ ಪತ್ತೆಯಾಗಿದೆ. ಸ್ವಾತಿ ಕುಟುಂಬಸ್ಥರಿAದ ಸೂರ್ಯ ಮತ್ತು ಕೊಲೆಗೆ ಕುಮ್ಮಕ್ಕು ಹಿನ್ನಲೆ ಆತನ ತಂದೆ ಸ್ವಾಮಿ ಮೇಲೆ ಸೆ. ೨೩ ರಂದು ಭದ್ರಾವತಿ ಠಾಣೆಗೆ ದೂರು ನೀಡಿದ್ದರು.

ಭದ್ರಾವತಿ ಗ್ರಾಮಾಂತರ ಪೊಲೀಸರು ಎ೧ ಸೂರ್ಯ ಮತ್ತು ಎ೨ ಸ್ವಾಮಿ ವಿರುದ್ಧ ಕೊಲೆ ಕೇಸ್ ದಾಖಲಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Share It

You cannot copy content of this page