ಸುದ್ದಿ

BIG BREAKINGಪ್ರಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ನಿಧನ

Share It

ಬೆಂಗಳೂರು : ಸರಸ್ವತಿ ಸಮ್ಮಾನ್ ಮತ್ತು ಪದ್ಮಭೂಷಣ ಪುರಸ್ಕೃತ ಕನ್ನಡದ ಪ್ರಮುಖ ಕಾದಂಬರಿಕಾರ, ಚಿಂತಕ, ಹಿರಿಯ ಸಾಹಿತಿ ಎಲ್‌.ಎಲ್.ಭೈರಪ್ಪ (94) ವಿಧಿವಶರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ಅವರು ನಿಧನ ಹೊಂದಿದರು. ಅಂತ್ಯಕ್ರಿಯೆ ಎಲ್ಲಿ ನಡೆಯಲಿದೆ? ಎಂಬ ಕುರಿತು ಇನ್ನೂ ಮಾಹಿತಿ ತಿಳಿದಯಬರಬೇಕಿದೆ.

ಎಸ್.ಎಲ್.ಭೈರಪ್ಪ ನಿವಾಸ ಮೈಸೂರು ನಗರದಲ್ಲಿದೆ. ಆದರೆ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿನಿಂದ ಬೆಂಗಳೂರು ನಗರದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

ಪದ್ಮಭೂಷಣ ಪುರಸ್ಕೃತರು: ಎಸ್. ಎಲ್. ಭೈರಪ್ಪ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದ ಕೊಡುಗೆ ಪರಿಗಣಿಸಿ 2010 ಸರಸ್ವತೀ ಸಮ್ಮಾನ್, 1975ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2023ರಲ್ಲಿ ಪದ್ಮಭೂಷಣ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳನ್ನು ನೀಡಲಾಗಿತ್ತು. ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಕೆಲವು ದಿನಗಳ ಹಿಂದೆ ಉದ್ಘಾಟನೆಗೊಂಡಿತ್ತು.


Share It

You cannot copy content of this page