ಸುದ್ದಿ

ಕಡೂರು, ತರೀಕೆರೆ ಬಸ್ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ರಾಮಲಿಂಗಾ ರೆಡ್ಡಿ

Share It

ಚಿಕ್ಕಮಗಳೂರು: ಕಡೂರು, ತರೀಕೆರೆ ಬಸ್ ನಿಲ್ದಾಣ ಹಾಗೂ ಕಡೂರು ಬಸ್ ಘಟಕದ ನಿವೇಶನದಲ್ಲಿ ನಿರ್ಮಿಸಿರುವ ವಸತಿಗೃಹ ಉದ್ಘಾಟನೆಯನ್ನು ಸವಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕ, ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲಿದ್ದು, ಇದರ ಸದುಪಯೋಗವಾಗಲಿ. ಕಡೂರು ಮತ್ತು ತರೀಕೆರೆ ತಾಲ್ಲೂಕು ಕೇಂದ್ರಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವುದರಿಂದ ಸಮರ್ಪಕ ವ್ಯವಸ್ಥೆ ಇರುವ ಸುಸಜ್ಜಿತ ನಿಲ್ದಾಣಗಳ ಅಗತ್ಯತೆ ಹಿನ್ನೆಲೆಯಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಕಡೂರು ವಿಧಾನಸಭಾ ಶಾಸಕ ಆನಂದ್ ಕೆ.ಎಸ್ ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್.ಶ್ರೀನಿವಾಸ್ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಹಕರಿಸಿ, ಹೆಚ್ಚಿನ ಬಸ್ಸುಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಮಟ್ಟದಲ್ಲಿ ಬಸ್ಸುಗಳನ್ನು ಸಂಚರಿಸಲು ಸಹಕಾರ ನೀಡುವಂತೆ ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ಅವರು ಸಾರಿಗೆ ಸಂಸ್ಥೆ ವತಿಯಿಂದ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕಡೂರು ಪುರಸಭೆ ಅಧ್ಯಕ್ಷರಾದ ಭಂಡಾರಿ ಶ್ರೀನಿವಾಸ್ , ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಕಲ್ಲೇಶ್ ಹಾಗೂ ತರೀಕೆರೆ ಪುರಸಭೆ ಅಧ್ಯಕ್ಷ ವಸಂತಕುಮಾರ್ ಕವಾಲಿ, ಉಪಾಧ್ಯಕ್ಷರಾದ ಪಾರ್ವತಮ್ಮ, ಅಜ್ಜಂಪುರ ಗ್ಯಾರಂಟಿ ಸಮಿತಿ ಅಧ್ಯಕ್ಷ ಕುಮಾರ್, ಪುರಸಭೆ ಸದಸ್ಯರು ಉಪಸ್ಥಿತರಿದ್ದರು.


Share It

You cannot copy content of this page