ಉಪಯುಕ್ತ ಸುದ್ದಿ

ಭೀಮಾ ತೀರದಲ್ಲಿ ಭಾರಿ ಪ್ರವಾಹ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

Share It

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.


Share It

You cannot copy content of this page