ನಿರುದ್ಯೋಗಿಗಳಿಗೆ ಸರಕಾರದಿಂದ ಗುಡ್ ನ್ಯೂಸ್: 24,300 ಹುದ್ದೆಗಳ ಭರ್ತಿಗೆ ಸರಕಾರ ತೀರ್ಮಾನ
ಬೆಳಗಾವಿ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರ ಉದ್ದೇಶ ಹೊಂದಿದೆಯೇ ಎಂಬ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79694, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37572, ಒಳಾಡಳಿತದಲ್ಲಿ 28188 ಹುದ್ದೆಗಳು ಗರಿಷ್ಠ ಪ್ರಮಾಣದಲ್ಲಿ ಖಾಲಿ ಇವೆ. ಈ ರೀತಿ 2025-26ನೇ ಸಾಲಿನಲ್ಲಿ ಒಟ್ಟು 43 ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭರ್ತಿ ಮಾಡಲು ಆರ್ಥಿಕ ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.


