ಯಾದಗಿರಿ: ಹಿರೇಹನೂರು ಬ್ಯಾರೇಜ್ ಗೆ 75 ಕೋಟಿ ರು. ವೆಚ್ಚದಲ್ಲಿ ಸ್ವಯಂಚಾಲಿತ ಗೇಟ್ ಅಳವಡಿಕೆ
ಬೆಳಗಾವಿ: 2013ರಲ್ಲಿ ಯಾದಗಿರಿ ತಾಲ್ಲೂಕಿನ ಹಿರೇಅನೂರು ಗ್ರಾಮದ ಹತ್ತಿರ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್ ಹಳೆಯದಾಗಿದ್ದು, ರೂ.75 ಕೋಟಿ ವೆಚ್ಚದಲ್ಲಿ ಹೊಸದಾಗಿ ಸ್ವಯಂಚಾಲಿತ ಗೇಟ್ ಅಳವಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತನ್ನೂರು ಅವರ ಗಮನ ಸೆಳೆಯುವ ಸೂಚನೆಗೆ ಸಣ್ಣ ಉತ್ತರ ನೀಡಿದ ಅವರು, ಯೋಜನೆಯಡಿ ಬ್ಯಾರೇಜ್‍ನ ಎಲ್ಲಾ ಹಳೆಯ ಗೇಟ್‍ಗಳನ್ನು ಬದಲಾಯಿಸಿ ಸ್ವಯಂಚಾಲಿತ ಗೇಟ್ ಅಳವಡಿಸಲಾಗುವುದು. ಹಿರೇಅನೂರು ಬ್ಯಾರೇಜ್ ಕಾಮಗಾರಿಗೆ ಇಲಾಖೆಯ ನಿರ್ವಹಣೆ ಲೆಕ್ಕ ಶೀರ್ಷಿಕೆಯಡಿ ಅನುದಾನ ಒದಗಿಸಬೇಕಿದೆ ಎಂದರು.
ಈ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗುತ್ತಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣಕಾಸು ಇಲಾಖೆಯಿಂದ ಹಣ ಮಂಜೂರಿಗೆ ಪ್ರಯತ್ನಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಯೋಜನೆಗೆ ಹಣ ಮೀಸಲಿರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.


