ಸಾರಿಗೆ ಇಲಾಖೆಯಲ್ಲಿ ಅಕ್ರಮ ಬಡ್ತಿ ಆರೋಪ: ದಾಖಲೆಗಳಿದ್ದರೆ ಕೊಡಿ ಕಾನೂನು ಕ್ರಮ ಕೈಗೊಳ್ತೇವೆ ಎಂದ ಸಚಿವ ರಾಮಲಿಂಗಾ ರೆಡ್ಡಿ
ಬೆಳಗಾವಿ: ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿ ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ನಡೆದಿರುವ ಕುರಿತು ದಾಖಲೆಗಳಿದ್ದರೆ ಕೊಡಿ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರು, ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿ ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದು ಬಡ್ತಿ ಪಡೆದಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಅಕ್ರಮ ರುಜುವಾತಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಅಕ್ರಮ ನಡೆದಿರುವ ಕುರಿತು ಸರಿಯಾದ ದಾಖಲೆಗಳಿದ್ದರೆ ನೀಡಿ. ಆಗ ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಸುಖಾಸುಮ್ಮನೆ ಆರೋಪ ಮಾಡಬೇಡಿ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.


