ಮಂಡ್ಯ : ಡಿಸೆಂಬರ್ 13, 14 & 15. ಸ್ಥಳ : ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು, ಬೆಂಗಳೂರು-ಮೈಸೂರು ರಸ್ತೆ, ಮಂಡ್ಯ ನಗರ.
ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಕೊಟ್ಟೇ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ. ಇದರ ಜೊತೆಗೆ “ಮ್ಯಾಗ್ನೆಟ್ ಶಾಲೆಗಳು ಹಾಗೂ ಕೆಪಿಎಸ್ ಶಾಲೆಗಳು ಎಂಬ ಹೆಸರಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಶಾಶ್ವತವಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ದಲ್ಲಾಳಿಯಾಗಿ ಸರ್ಕಾರ ಸಮಾಜ ವಿರೋಧಿ, ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಸಮಯ ಬಂದಿದೆ.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗಳೇ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಆದ್ದರಿಂದ ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತಂದು, ಇವತ್ತಿನ ದಿನ ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಬಡವರ ಮಕ್ಕಳಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಂಘ ಮೂರು ದಿನಗಳ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.
ಪ್ರಮುಖ ಬೇಡಿಕೆಗಳು :
- ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲೂ ಎಲ್ಕೆಜಿಯಿಂದ 5ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್ಸಿ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು.
- ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲೂ 6ನೇ ತರಗತಿಯಿಂದ 12ನೇ ತರಗತಿಯವರೆಗೆ ನವೋದಯ ಮಾದರಿ ಸಿಬಿಎಸ್ಸಿ ವಸತಿ ಶಾಲಾ ಶಿಕ್ಷಣ ನೀಡಬೇಕು.
- ಕೊನೆಯದಾಗಿ ಸರ್ಕಾರಕ್ಕೆ ಯೋಗ್ಯತೆ ಇಲ್ಲವಾದರೆ ಶಿಕ್ಷಣ ಇಲಾಖೆಯ ಅನುದಾನವನ್ನು ನೇರವಾಗಿ ಪ್ರತಿಯೊಂದು ಸರ್ಕಾರಿ ಶಾಲೆಯ ಎಸ್ಡಿಎಂಸಿ ಖಾತೆಗೆ ವರ್ಗಹಿಸಿದರೆ, ಹಾಲಿನ ಡೈರಿ ರೀತಿ, ಎಸ್ಡಿಎಂಸಿಯವರೇ ಶಿಕ್ಷಕರ ನೇಮಕ ಮಾಡಿ, ಮೂಲಭೂತ ಸೌಕರ್ಯ ಒದಗಿಸಿ ಶಾಲೆಗಳನ್ನು ಮುನ್ನಡೆಸಿ, ಸರ್ಕಾರೀ ಶಾಲೆಗಳಿಗೆ ಬೀಗ ಹಾಕುವ ಕೆಲಸಕ್ಕೆ ಶಾಶ್ವತವಾಗಿ ತೆರೆ ಎಳೆಯಲಿದ್ದಾರೆ.
ಈ ಸಂಧರ್ಭದಲ್ಲಿ ಅಶ್ವತ. ಟಿ.ಮರಿಗೌಡ ನೆರವು ಕಟ್ಟಡ ಮತ್ತು ಅಸಂಘಟಿತ ಸಂಘ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು, ಸಂತೋಷ್ ಮಂಡ್ಯ ಗೌಡ, ಇಂಡುವಾಳ ಚಂದ್ರಶೇಖರ್, ಶಿವಳ್ಳಿ ಚಂದ್ರಶೇಖರ್, ಅನೀಲ್ ಕುಮಾರ್.ವಿ.ಎಮ್. ರೇವಣ ಮೈಸೂರ್, ಮಂಡ್ಯ ಜಿಲ್ಲಾ ರೈತರ ಸಂಘ, ಹಾಗೂ ಕರ್ನಾಟಕ ರಾಜ್ಯ ಎಸ್.ಡಿ.ಎಮ್.ಸಿ.ಸಂಘ ಪದಾಧಿಕಾರಿಗಳು ಮತ್ತು ನೆರವು ಮಂಡ್ಯ ಅಧ್ಯಕ್ಷರ ನವೀನ ಕುಮಾರ, ನೆರವು ಮಳವಳ್ಳಿ ತಾಲೂಕು ಅಧ್ಯಕ್ಷರು ವಿನೋದ ಕುಮಾರ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಬೋರೇಗೌಡ. ಟಿ ಎಂ ಮತ್ತು ಕರ್ನಾಟಕ ತುಂಬೆಲ್ಲಾ ಇರುವ ನೆರವು ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದರು.
ವರದಿ : ಶಿವು ರಾಠೋಡ
