ರಾಜಕೀಯ ಸುದ್ದಿ

ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ: ಸಿಎಂ ಸ್ಥಾನ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Share It

ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಿದ್ದೇನೆ ಎಂದು ತಿಳಿಸಿದ್ದಾರೆ.


Share It

You cannot copy content of this page