ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಂದು ಹೊಸ ಪಾರ್ಟಿ: ಕಾಂಗ್ರೆಸ್ ಗೆ ಟಕ್ಕರ್ ಕೊಡ್ತಾರಾ ಇಬ್ರಾಹಿಂ?
ಬೆಂಗಳೂರು: ಸಿಎಂ ಇಬ್ರಾಹಿಂ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಶಕ್ತಿಯ ಉದಯದ ಮುನ್ಸೂಚನೆ ನೀಡಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ನೀಡಿದ್ದಾರೆ.
ಜ.14 ರಂದು ಹೊಸ ರಾಜಕೀಯ ಪಕ್ಷ ಆರಂಭಿಸುವ ಕುರಿತು ಸಿಎಂ ಇಬ್ರಾಹಿಂ ಮಾತಮಾಡಿದ್ದು, ನವ ಕರ್ನಾಟಕ ನಿರ್ಮಾಣ ಆಂದೋಲನದ ಹೆಸರಿನಲ್ಲಿ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಆಪ್ತರ ಸಭೆ ನಡೆಸಿದ್ದಾರೆ.
ಪಕ್ಷವೂ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಿದ್ಧಾಂತದಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಚಿಹ್ನೆಯನ್ನು ಸಮಾನ ಮನಸ್ಕ ನಾಯಕರು ಸೇರಿ ಅಂತಿಮಗೊಳಿಸಲಿದ್ದೇವೆ ಎಂದು ತಿಳಿಸಿದ್ದಾರೆ.


