ಗದಗ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ : ತೀವ್ರ ಪರಿಶೀಲನೆ
ಗದಗ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬದರಿಕೆ ಇ-ಮೇಲ್ ಬಂದಿದ್ದು, ಜಿಲ್ಲಾಡಳಿತ ಭವನದಲ್ಲಿ ತೀವ್ರ ಆತಂಕ ಮನೆ ಮಾಡಿತ್ತು.
ಸೋಮವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಯವರ ಅಧಿಕೃತ ಇ- ಮೇಲ್ ಗೆ ಬೆದರಿಕೆ ಸಂದೇಶ ಬಂದಿತ್ತು. ಪ್ರಮುಖ ಐದು ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಉಲ್ಲೇಖಿಸಲಾಗಿತ್ತು. ಇದರಿಂದ ಅಧಿಕಾರಿಗಳು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.


