ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿ
ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರು ನೀಡಿದ ಮಾಹಿತಿಯ ಮೇರೆಗೆ ಹೊಯ್ಸಳ ಪೊಲೀಸರ ಸಹಕಾರದಲ್ಲಿ ವಿನೋದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಸಂಜೆಯಾಗುತ್ತಲೇ ಒಂಟಿಯಾಗಿ ಓಡಾಡುವ ಹೆಣ್ಣು ಮಕ್ಕಳನ್ನು ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.


