ಶ್ಯಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಗಣ್ಯಾತೀಗಣ್ಯರು ಭಾಗಿ

Share It

ದಾವಣಗೆರೆ: ಹಿರಿಯ ಶಾಸಕ, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಅಂತಿಮ ಸಂಸ್ಕಾರ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯಿತು.

ಅನಾರೋಗ್ಯದಿಂದ ಮೃತಪಟ್ಟ ಅವರ ಅಂತಿಮ ದರ್ಶನಕ್ಕೆ ಜಿಲ್ಲೆಯ ಲಕ್ಷಾಂತರ ಜನರು ಆಗಮಿಸಿದ್ದರು. ಶಿವಶಂಕರಪ್ಪ ಅವರ ಕಾರ್ಖಾನೆಗಳು, ಶಾಲೆ ಕಾಲಳೆಜುಗಳ ವಿದ್ಯಾರ್ಥಿಗಳು, ಸಿಬ್ಬಂದಿ ಅಂತಿಮ ದರ್ಶನಕ್ಕೆ ಆಗಮಿಸಿ, ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸಿದ್ದರು.

ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಅನೇಕ ಸಚಿವರು, ಶಾಸಕರು ಮತ್ತು ಎಲ್ಲ ಪಕ್ಷದ ಮುಖಂಡರು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು.

ಪಂಚಪೀಠಗಳ ಸ್ವಾಮೀಜಿಗಳು, ತರಳಬಾಳು ಮಠದ ಶ್ರೀಗಳ ನೇತೃತ್ವದಲ್ಲಿ ಶ್ಯಾಮನೂರು ಪುತ್ರರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು.


Share It

You May Have Missed

You cannot copy content of this page