SCP/TSP ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಪ್ರತಿಭಟನೆ

Share It

ಬೆಳಗಾವಿ: ದಲಿತರಿಗೆ ಮೀಸಲಿರುವ  ಎಸ್ ಸಿ ಎಸ್ ಪಿ / ಟಿಎಸ್ ಪಿ ಅನುದಾನದ ಬಳಕೆಯ ಮೇಲ್ವಿಚಾರಣೆಗೆ ತಾಲೂಕು, ಜಿಲ್ಲಾ ಮಟ್ಟದ ಸಮಿತಿ ರಚಿಸುವಂತೆ ಭೀಮ್ ಆರ್ಮಿ ಸದಸ್ಯರು ಆಗ್ರಹಿಸಿದರು.

ಭೀಮ್ ಆರ್ಮಿ ರಾಜ್ಯಾಧ್ಯಕ್ಷ ರಾಜಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರಕಾರ ಈ ಕುರಿತು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿದ ಬೈರತಿ ಸುರೇಶ್, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಮಾಡುವುದಾಗಿ ಭರವಸೆ ನೀಡಿದರು.

ಅಹಿಂದ ವರ್ಗಗಳ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎಂದಿಗೂ ಈ ಸಮುದಾಯವನ್ನು ನಮ್ಮ ಸರ್ಕಾರ ಕೈಬಿಡುವುದಿಲ್ಲ ಎಂದು ಭರವಸೆ ನೀಡಿದರು.


Share It

You May Have Missed

You cannot copy content of this page