ಡಿ.ಕೆ.ಮುಂದಿನ ಸಿಎಂ : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಘೋಷಣೆ
ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಸೋಮವಾರದ ಅಧಿವೇಶನದಲ್ಲಿ ಡಿಸಿಎಂ ಡಿಕೆಶಿ ಭಾಗವಹಿಸಿರಲಿಲ್ಲ. ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಆಗಮಿಸಿದ್ದರು. ದಾವಣಗೆರೆಯಲ್ಲಿ ಶ್ಯಾಮನೂರು ಅಂತಿಮ ಸಂಸ್ಕಾರದ ನಂತರವೂ ಖರ್ಗೆಯವರ ಜತೆಗೆ ಉಳಿದಿದ್ಸರು.
ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಬರಮಾಡಿಕೊಂಡ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂದು ಘೋಷಣೆ ಕೂಗಿದ್ದಾರೆ. ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.


