ಕೋಳಿ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ: ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸರಕಾರ ಸೂಚನೆ
ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


