ಆಟವಾಡುವಾಗ ವಿದ್ಯುತ್ ತಂತಿ ತುಳಿದು ಮೊರಾರ್ಜಿ ಶಾಲೆ ವಿದ್ಯಾರ್ಥಿ ಸಾವು

Share It

ಚಿಕ್ಕೋಡಿ: ಆಟವಾಡುತ್ತಾ ವಿದ್ಯುತ್ ತಂತಿ ತುಳಿದ ಪರಿಣಾಮ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆ ೭ನೇ ತರಗತಿ ವಿದ್ಯಾರ್ಥಿ ಕೃಷ್ಣಾ ಹೆಗಡೆ (೧೩) ಸಾವನ್ನಪ್ಪಿದ ಬಾಲಕ. ಈತ ಗುರುವಾರ ಸಂಜೆ ಹಾಸ್ಟೆಲ್‌ನ ಕೆಲವು ವಿದ್ಯಾರ್ಥಿಗಳ ಜತೆಗೆ ಕ್ರಿಕೆಟ್ ಆಟವಾಡುತ್ತಿದ್ದ ಎನ್ನಲಾಗಿದೆ. ಬಾಲ್ ತರಲು ಹೋದಾಗ ವಿದ್ಯುತ್ ವೈರ್ ಮೇಲೆ ಕಾಲು ಇಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದನ್ನು ಗಮನಿಸದೆ ಇರುವುದರಿಂದ ಅವಘಡ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದವನಾದ ಈ ಬಾಲಕ ಎರಡು ವರ್ಷಗಳಿಂದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸದಲಗಾ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


Share It

You May Have Missed

You cannot copy content of this page