ಬೈರತಿ ಬಸವರಾಜುಗೆ ಬಂಧನದ ಭೀತಿ: ಹೈಕೋರ್ಟ್ನಿಂದ ಬಂಧನ ವಿನಾಯಿತಿ ನಕಾರ
ಬೆಂಗಳೂರು: ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ತಮಗೆ ಬಂಧನದಿAದ ವಿನಾಯಿತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಎದುರಾಗಿದೆ.
ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಬಂಧನಕ್ಕಾಗಿ ಪೊಲೀಸರು ಬಸವರಾಜ್‌ಗೆ ವಾರಂಟ್ ನೀಡಿದ್ದರು. ಈ ವಾರೆಂಟ್ ಪ್ರಶ್ನಿಸಿ, ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ಬೈರತಿ ಬಸವರಾಜ್, ತಮಗೆ ಬಂಧನದಿAದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ, ನಿರೀಕ್ಷಣಾ ಜಾಮೀನು ನೀಡಲು ನ್ಯಾ. ಸುನೀಲ್ ದತ್ ಯಾವದ್ ಅವರಿದ್ದ ಪೀಠ ನಿರಾಕರಿಸಿದೆ.
ಜತೆಗೆ, ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು, ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಎದುರಾಗಿದೆ. ಉಳಿದ ಜೈಲಿನಲ್ಲಿರುವ ಆರೋಪಿಗಳೀಗೆ ಜಾಮೀನು ಸಿಗುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಇನ್ನೂ ಚಾರ್ಜ್ಶೀಟ್ ಸಲ್ಲಿಕೆಯಾಗದಿರುವ ಕಾರಣದಿಂದ ಜಾಮೀನು ಸಾಧ್ಯತೆಯಿದ್ದು, ಬಸವರಾಜ್ ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.


