5 ವರ್ಷ ನಾನೇ ಮುಖ್ಯಮಂತ್ರಿ: ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸಿಎಂ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಈವರೆಗಿನ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಸದನದಲ್ಲಿ ಬಿಜೆಪಿ ಶಾಸಕರ ಮಾತಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ, ನಾನು ಐದು ವರ್ಷಕ್ಕೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ.
ಸಿಎಂ ಸ್ಥಾನದ ವಿಚಾರದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ ಎಂದು ವರದಿಯಾಗಿತ್ತು. ಅನೇಕ ಶಾಸಕರು ಡಿಕೆಶಿ ಪರ ಬ್ಯಾಟ್ ಬೀಸಿದ್ದರು. ಕೆಲವರು ದೆಹಲಿಗೆ ತೆರಳಿ ಹೈಕಮಾಂಡ್ ಮನವೊಲಿಸುವ ಪ್ರಯತ್ನ ಮಾಡಿದ್ದರು.
ಇದೀಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇದೀಗ ಡಿಕೆಶಿ ಬೆಂಬಲಿಗರ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ. ರಾತ್ರಿ ನಡೆದ ಅಹಿಂದ ಸಚಿವರು, ಶಾಸಕರ ಸಭೆಯ ನಂತರ ಸಿಎಂ ನೀಡಿರುವ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.


