ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯನಿಂದ ತಿಮರೋಡಿ ತಂಡದ ವಿರುದ್ಧ ದೂರು
ಬೆಳ್ತಂಗಡಿ: ತನಗೆ ಹಾಗೂ ತನ್ನ ಪತ್ನಿಗೆ ತಿಮರೋಡಿ ಮತ್ತು ತಂಡದಿಂದ ಜೀವಬೆದರಿಕೆಯಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ದೂರು ನೀಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಎಂ.ಡಿ. ಸಮೀರ್ ವಿರುದ್ಧ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು, ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.


