ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ಜತೆಗೆ ಸಂಪರ್ಕ: ಯಲಹಂಕ ಪಿಎಸ್ಐ ನಾಗರಾಜ್ ಅಮಾನತು
ಬೆಂಗಳೂರು: ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯ ಜತೆಗೆ ಗಾಢ ಸಂಪರ್ಕದಲ್ಲಿದ್ದ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.
ರೌಡಿಶೀಟರ್ ದಾಸ ಎಂಬಾತನ ಜತೆ ಸಂಪರ್ಕ ಯಲಹಂಕದ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್ಐ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಪಿಎಸ್ಐ ನಾಗರಾಜ್ ಅವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ.
ಡೌಡಿಶೀಟರ್ ದಾಸ ಲ್ಯಾಂಡ್ ಗ್ರಾಬಿಂಗ್, ಹಲ್ಲೆ, ಬೆದರಿಕೆ ಪ್ರಕರಣಗಳು ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಆತನ ಜತೆಗೆ ಪಿಎಸ್ಐ ನಾಗರಾಜ್ ಸಂಪರ್ಕದಲ್ಲಿದ್ದು, ಆಗಾಗ ಇಬ್ಬರು ಜತೆಯಾಗಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.


