ಬೆಂಗಳೂರಲ್ಲಿ ಐಪಿಎಲ್ ಪಂದ್ಯಗಳು : ಗೃಹಸಚಿವರ ನೇತೃತ್ವದಲ್ಲಿ ಮೀಟಿಂಗ್
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡುವ ಕುರಿತು ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಅನುಮತಿ ನೀಡಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗುತ್ತಿದ್ದು, ನ್ಯಾ.ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಡಿಜಿಮತ್ತು ಐಜಿಪಿ ಸಲೀಂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್‌ಕುಮಾರ್ ಸಿಂಗ್, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

