ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ಮನವಿ ಮಾಡಿದ್ದಾರೆ.
ಹೈಕೋರ್ಟ್ ಜಾಮೀನು ನಿರಾಕರಣೆ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಸಂಜೆ ೪ ಗಂಟೆಗೆ ಆರೋಪಪಟ್ಟಿ ಸಲ್ಲಿಕೆಗೆ ಸಿದ್ಧತೆ ನಡೆಸಿರುವುದಾಗಿ ತಿಳಿಸಿದರು.
ಬಸವರಾಜ್ ಪರ ವಕೀಲರು, ಆಕ್ಷೇಪಣೆ ಸಲ್ಲಿಕೆ ಮಾಡದಿದ್ದರೆ, ಆರೋಪಪಟ್ಟಿ ಸಲ್ಲಿಕೆ ಮಾಡಲು ತಡವಾದರೆ, ಬಂಧನದಿAದ ರಿಯಾಯಿತಿ ಕೊಡಬೇಕು ಎಂದು ಮನವಿ ಮಾಡಿದರು. ವಿಚಾರಣೆಯನ್ನು ನ್ಯಾಯಾಲಯ ಸಂಜೆ ೫ ಗಂಟೆಗೆ ಮುಂದೂಡಿತು.


