ಸಿನಿಮಾ ಸುದ್ದಿ

ಪ್ರಕಾಶ್ ರೈ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ !

Share It

ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಪ್ರಕಾಶ್ ರಾಜ್ ಅವರ ಆಯ್ಕೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಈ ಬಾರಿಯ ಚಲನಚಿತ್ರೋತ್ಸವ ಜ.29 ರಿಂದ ಫೆ.3 ವರೆಗೆ ನಡೆಯಲಿದೆ. ಸುಮಾರು 200 ವಿವಿಧ ಭಾಷೆಯ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

ಮಹಿಳಾ ಸಬಲೀಕರಣದ ಥೀಮ್‌ ನಲ್ಲಿ ಚಿತ್ರೋತ್ಸವ ನಡೆಯಲಿದೆ ಎಂದ ಸಿಎಂ ಸಿದ್ದರಾಮಯ್ಯ ಅವರು, ಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ನಿರ್ದೇಶಕ ತರುಣ್ ಸುದೀರ್, ಶರತ್ ಲೋಹಿತಾಶ್ವ ಸೇರಿ ಚಿತ್ರರಂಗದ ಪ್ರಮುಖ ಗಣ್ಯರು ಇದ್ದರು.


Share It

You cannot copy content of this page