ಬೆಂಗಳೂರು: ಪತ್ನಿಯ ಮೇಲೆ ಏಕಾಏಕಿ ಗನ್ ನಿಂದ ಗುಂಡುಹಾರಿಸಿ ಕೊಲೆ ಮಾಡಿರುವ ಘಟನೆ ಬಸವೇಶ್ವರ ನಗರದ ವೆಸ್ಟಿನ್ ಹೊಟೇಲ್ ಬಳಿ ನಡೆದಿದೆ.
ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ವೆಸ್ಟಿನ್ ಹೋಟೆಲ್ ಬಳಿ ಇದ್ದಕ್ಕಿದ್ದಂತೆ ಗುಂಡಿನ ಸದ್ದು ಕೇಳಿಸಿದೆ. ಬಾಲಮುರುಗನ್ ಎಂಬಾತ ತನ್ನ ಪತ್ನಿಯ ಮೇಲೆ ಫೈರಿಂಗ್ ಮಾಡಿದ್ದಾನೆ. ಗುಂಡಿನ ದಾಳಿಗೆ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಲೆಯ ನಂತರ ಬಾಲಮುರುಗನ್ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

