ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಾನ್ಯಾ ಹತ್ಯೆ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.
ಪ್ರಕರಣದಲ್ಲಿ ಮರೇಪ್ಪ ದೊಡ್ಡಮನಿ, ಸುನೀಲ್ ಹರಿಜನ, ಸಂಗೀತಾ ಹರಿಜನ, ರೇಣವ್ವ, ಅನನ್ಯಾ ದೊಡ್ಡಮನಿ, ಯಲ್ಲಪ್ಪ ದೊಡ್ಡಮನಿ, ಹೂವಮ್ಮ ದೊಡ್ಡಮನಿ ಹಾಗೂ ವಿವೇಕಾನಂದ ದೊಡ್ಡಮನಿ ಅವರು ಗಾಯಗೊಂಡಿದ್ದರು. ದೇಶಪಾಂಡೆ ನಗರದಲ್ಲಿರುವ ವಿವೇಕಾನಂದ ಆಸ್ಪತ್ರಗೆ ದಾಖಲಾಗಿರುವ ಅವರ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ಜಿಲ್ಲಾಧಿಕಾರಿ ವೈದ್ಯರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭಾ ಪಿ., ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಿಯದರ್ಶಿನಿ ಹಿರೇಮಠ, ಆಸ್ಪತ್ರೆಯ ವೈದ್ಯರು, ಕುಟುಂಬಸ್ಥರು ಇತರರು ಹಾಜರಿದ್ದರು.

