ಸಕಲೇಶಪುರ: ಸರಣಿ ರಜೆಗಳಿರುವ ಹಿನ್ನೆಲೆಯಲ್ಲಿ ಶಿರಾಢಿ ಘಾಟ್ ನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಕಿ.ಮೀಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬುಧವಾರ ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಬೆಂಗಳೂರಿನಿಂದ ಮಂಗಳೂರು, ಧರ್ಮಸ್ಥಳ ಕಡೆಗೆ ಹೋಗುವ ವಾಹನಗಳ ಸಂಖ್ಯೆ ಹೆಚ್ಚಾದ ಕಾರಣ ಸಕಲೇಶಪುರದ ಮುಂಜ್ರಾಬಾದ್ ಕೋಟೆ ಬಳಿ ಸುಮಾರು ಐದು ಕಿ.ಮೀ. ಸಂಚಾರ ದಟ್ಟಣೆ ಉಂಟಾಗಿತ್ತು.
ಸುಮಾರು ಎರಡು ಗಂಟೆ ಕಾಲ ಪ್ರಯಾಣಿಕರು ತಮ್ಮ ವಾಹನಗಳಲ್ಲಿಯೇ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಂಗಳೂರು ಕಡೆಗೆ ಬರುವ ಪ್ರಯಾಣಿಕರು ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಪರದಾಟ ನಡೆಸಿದರು.

