ಬೆಂಗಳೂರು: ಚಿತ್ರದುರ್ಗ ಖಾಸಗಿ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು,ಋತರ ಕುಟುಂಬಕ್ಕೆ ತಲಾ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಗಾಯಾಳುಗಳು ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥನೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ಎರಡು ಲಕ್ಷ ರು.ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಣೆ ನೀಡಿದ್ದಾರೆ.

