ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಸಾವು: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಚಿತ್ರದುರ್ಗ: ಹಿರಿಯೂರು ಬಳಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಬದುಕುಳಿದಿದ್ದ ಖಾಸಗಿ ಬಸ್ ಚಾಲಕ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರುಕಲಾಗಿದ್ದು, ಆರು ಮಂದಿ ಸಜೀವ ದಹನವಾಗಿದ್ದರು. ಆದರೆ, ಬಸ್ ನ ಚಾಲಕ ಮತ್ತು ನಿರ್ವಾಹಕ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಸೀ ಬರ್ಡ್ ಬಸ್ ಚಾಲಕ ರಫೀಕ್ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆತನಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ರಫೀಕ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಮೂಲದವನು ಎನ್ನಲಾಗಿದೆ.


