ಮೈಸೂರು ಅರಮನೆ ಬಳಿ ಸ್ಫೋಟ: ಗಾಯಗೊಂಡಿದ್ದ ಮತ್ತೊಬ್ಬ ಮಹಿಳೆ ಸಾವು
ಮೈಸೂರು: ಮೈಸೂರು ಅರಮನೆಯ ಬಳಿಯಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪ್ರಕರಣದಲ್ಲಿ ಇಬ್ಬರು ಮೃತಪಟ್ಟಂತಾಗಿದೆ.
ನಂಜನಗೂಡಿನ ಮಹಿಳೆ ಮಂಜುಳಾ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಬಲೂನ್ ಮಾರಾಟಗಾರ ಸಲೀಂ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದರು.
ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು, ಸಲೀಂ ಹಿನ್ನೆಲೆಯ ಕುರಿತು ತನಿಖೆ ಮಡೆಸುತ್ತಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂಬುದು ಮೇಲ್ನೋಟಕ್ಕೆ ಕಂಡಬಂದಿದ್ದರೂ, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.


