ಕೋಲಾರ: ರಾತ್ರಿ ಮನೆಯಿಂದ ಹೊರಹೋಗಿದ್ದ ವ್ಯಕ್ತಿ ಬೆಳಗ್ಗೆ ಶವವಾಗಿ ಪತ್ತೆ
ಕೋಲಾರ: ರಾತ್ರಿ ಮನೆಯಿಂದ ಶೌಚಾಲಯಕ್ಕೆಂದು ಹೊರಹೋಗಿದ್ದ ವ್ಯಕ್ತಿ, ಬೆಳಗ್ಗೆ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಕೊರೆವನೂರು ಗ್ರಾಮದಲ್ಲಿ ನಡೆದಿದೆ.
ಕೆಜಿಎಫ್ ತಾಲೂಕಿನ ಗೆನ್ನೇರಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಸುರೇಶ್ ಹತ್ಯೆಯಾದ ವ್ಯಕ್ತಿ. ಈತನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದು, ಸುರೇಶ್ ಶವ ಊರಿನ ಹೊರವಲಯದಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮುಳುಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


