ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಪಂ ಪಿಡಿಒ ಅಮಾನತು
ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ತಂದೆಯಿಂದಲೇ ನಡೆದ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಪಿಡಿಒ ಅಮಾನತು ಆದೇಶ ಹೊರಡಿಸಿದ್ದಾರೆ. ಪಿಡಿಒ ನಾಗರಾಜ ಗಿರಿಯಪ್ಪನವರ ಅವರು ಗರ್ಭಿಣಿ ಮಾನ್ಯ ಶವಸಂಸ್ಕಾರ ಸಂದರ್ಭದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿಲ್ಲ. ಅಲ್ಲದೆ, ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸ್ ಮಾಡಿಲ್ಲ ಎಂದು ಆರೋಫಿಸಲಾಗಿದೆ.
ಜತೆಗೆ, ಅಂತ್ಯಸAಸ್ಕಾರದ ವೇಳೆ ಪೊಲೀಸರು ಪಂಚಾಯತ್ ಸಿಬ್ಬಂದಿ ಸಹಾಯ ಕೇಳಿದಾಗ ಅದಕ್ಕೂ ಸ್ಪಂದಿಸದೆ, ಶಿಷ್ಟಾಚಾರ ಪಾಲಿಸುವಲ್ಲಿ ಹಾಗೂ ಕರ್ತವ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬAಧಿಸಿ ಕರ್ತವ್ಯ ಲೋಪದ ಮೇಲೆ ಹುಬ್ಬಳ್ಳಿ ಗ್ರಾಮಿಣ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿತ್ತು.


