ಜ. 5 ರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ

Share It

ನವದೆಹಲಿ:  ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು  ವಿಬಿ_ ಜಿ  ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು  ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು.

ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ  ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ  ಸೂಚಿಸಲಾಗಿದೆ ಎಂದರು.


Share It

You May Have Missed

You cannot copy content of this page