ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಬೆನ್ನಲ್ಲೇ ದಾಳಿ ಮುಂದುವರಿಸಿರುವ ಪೊಲೀಸರು ಮತ್ತೊಂದು ಡ್ರಗ್ಸ್ ಜಾವವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಡೆಪಾಳ್ಯದ ಡ್ರಗ್ಸ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಒಬ್ಬ ವಿದೇಶಿ ಪ್ರಯೆಯೂ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 2.3 ಲಕ್ಷ ರು. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ರಿಸ್ಟೋಫರ್ ಮೆಕಡಾನಿಸ್ ಬಂಧಿತ ವಿದೇಶಿ ಪ್ರಜೆಯಾಗಿದ್ದು, ಮತ್ತೊಬ್ಬ ಆರೋಪಿ ನವೀನ್ ರಾಜ್ ತಮಿಳುನಾಡು ಮೂಲದವನು ಎನ್ನಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

