ಅಪರಾಧ ಸುದ್ದಿ

ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ಸುಟ್ಟುಕರಕಲಾದ ವೃದ್ಧ, ಹಲವರಿಗೆ ಗಾಯ

Share It

ವಿಶಾಖಪಟ್ಟಣ : ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಯಲಮಂಚಿಲಿ ಎಂಬಲ್ಲಿ ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ವೃದ್ಧ ಪ್ರಯಾಣಿಕರೊಬ್ಬರು ಸುಟ್ಟು ಕರಕಲಾಗಿದ್ದಾರೆ.

ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ. ಸೋಮವಾರ (ಡಿ.29) ಬೆಳಗ್ಗೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಯಲಮಂಚಿಲಿ ರೈಲು ನಿಲ್ದಾಣದ ಬಳಿ ರೈಲು ಸಂಖ್ಯೆ 18189 ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ರೈಲಿಗೆ ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು. ಬಿ1 ಬೋಗಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ.

ಬೆಂಕಿ ನಂದಿಸಿದ ನಂತರ ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ನಂತರ ರೈಲು ಎರ್ನಾಕುಲಂ ಕಡೆಗೆ ತೆರಳಿದೆ. ಹಾನಿಗೊಳಗಾದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ. ಬೆಂಕಿ ಅನಾಹುತಕ್ಕೆ ಕಾರಣ ಕಂಡುಹಿಡಿಯಲು ಎರಡು ವಿಧಿವಿಜ್ಞಾನ ತಂಡಗಳು ಕೆಲಸ ಮಾಡುತ್ತಿವೆ.


Share It

You cannot copy content of this page