ಬೆಂಗಳೂರು: ಮನಿ ಲಾಂಡ್ರಿAಗ್ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಲಭಿಸಿದೆ.
ಕಳೆದ ವಾರವೇ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಇಂದು ಜಾಮೀನು ತೀರ್ಪು ಪ್ರಕಟಿಸಿದ್ದು, ವೀರೇಂದ್ರ ಪಪ್ಪಿಗೆ ಇಡಿ ಪ್ರಕರಣದಲ್ಲಿ ಜಾಮೀನು ಲಭಿಸಿದೆ.
ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದು, ಐದು ಲಕ್ಷ ರುಪಾಯಿ ಬಾಂಡ್ ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿದೆ. ಜತೆಗೆ ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ಬಿಟ್ಟು ತೆರಳಬಾರದು, ಸಾಕ್ಷಿಗಳಿಗೆ ಹೆದರಿಸಬಾರದು ಹಾಗೂ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಿದೆ.

