ಅಪರಾಧ ಸಿನಿಮಾ ಸುದ್ದಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್: ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

Share It

ಬೆಂಗಳೂರು: ತಮ್ಮ ಬಗ್ಗೆ ಕೆಟ್ಟ ಕಮೆಂಟ್ ಮಾಡಿರುವ ದೂರಿನ ಕುರಿತು ಶೀಘ್ರವ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಸಿಸಿಬಿ ಆಯುಕ್ತರ ಕಚೇರಿಗೆ ಭೇಟಿ ನೀಡಿದರು.

ಸಿಸಿಬಿ ಜಂಟಿ ಆಯುಕ್ತರಾದ ಅಜಯ್ ಹಿಲೋರೆ ಕಚೇರಿಗೆ ಭೇಟಿ ನೀಡಿದ ವಿಜಯಲಕ್ಷ್ಮಿ ಅವರು, ಆರೋಪಿಗಳ ವಿರುದ್ಧ ಶೀಘ್ರ ಕ್ರಮಕ್ಕೆ ಆಗ್ರಹಿಡಿದರು. ಈ ಕುರಿತು ಪೊಲೀಸ್ ತಂಡ ರಚನೆ ಮಾಡಿದ್ದು, ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದರು.

ಸುದೀಪ್ ನೀಡಿದ್ದ ಹೇಳಿಕೆಗೆ ವಿಜಯಲಕ್ಷ್ಮಿ ಕೌಂಟರ್ ನೀಡಿದ ನಂತರ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್‌ಗಳು, ಬೆದರಿಕೆಗಳು ಬಂದಿದ್ದವು. ಹೀಗಾಗಿ, ವಿಜಯಲಕ್ಷ್ಮಿ ಅವರು ಸಿಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.


Share It

You cannot copy content of this page