ಅಪರಾಧ ಸುದ್ದಿ

ಚಿತ್ರದುರ್ಗ ಬಸ್ ದುರಂತ: ಮೃತರ ಸಂಖ್ಯೆ 8 ಕ್ಕೆ ಏರಿಕೆ, ಮತ್ತೊಬ್ಬ ಗಾಯಾಳು ಸಾವು

Share It

ಬೆಂಗಳೂರು: ಚಿತ್ರದುರ್ಗ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುನಾಥ್ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮಂಜುನಾಥ್ ಶೇ.40 ರಷ್ಟು ಸುಟ್ಟು ಹೋಗಿದ್ದರು. ಹೀಗಾಗಿ, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಬುಧವಾರ ಮೃತಪಟ್ಟಿದ್ದಾರೆ.

ಮಂಜುನಾಥ್‌ಗೆ 26 ವರ್ಷ ವಯಸ್ಸಾಗಿತ್ತು. ಇವರು ಸೀ ಬರ್ಡ್ ಬಸ್‌ನಲ್ಲಿ ಗೋಕರ್ಣಗೆ ತೆರಳುತ್ತಿದ್ದರು. ಚಿತ್ರದುರ್ಗ ಬಳಿ ನಡೆದ ಅಪಘಾತದಲ್ಲಿ ಸುಟ್ಟಗಾಯಗಳೊಂದಿಗೆ ಪಾರಾಗಿದ್ದರು, ಅವರಿಗೆ ಮೊದಲಿಗೆ ಹಿರಿಯೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಟ್ಟು, ನಂತರ ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿತ್ತು.


Share It

You cannot copy content of this page