ಧಾರವಾಡ: ಬ್ಯಾಂಕ್ ದರೋಡೆ ಯತ್ನವೊಂದು ವಿಫಲವಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಶಿರೂರ ಗ್ರಾಮದ ಎಸ್‌ಬಿಐ ಬ್ಯಾಂಕ್ ದರೋಡೆಗೆ ಖದೀಮರು ಯತ್ನಿಸಿದ್ದಾರೆ. ಬ್ಯಾಂಕ್‌ನಲ್ಲಿ ೫ ಕೋಟಿ ಮೌಲ್ಯದ ಬಂಗಾರ ಹಾಗೂ ೧೧ ಲಕ್ಷ ನಗದು ಹಣ ಇತ್ತು. ಖದೀಮರು ಬ್ಯಾಂಕ್ ಹಿಂದಿನ ಗೋಡೆ ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಸ್ವಲ್ಪ ಗೋಡೆ ಒಡೆದ ನಂತರ ಶಬ್ದ ಬಂದ ಕಾರಣ ಸ್ಥಳದಿಂದ ಪರಾರಿಯಾಗಿದ್ದಾರೆ.
ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಕೆಲಸಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ನವಲಗುಂದ ಪೊಲೀಸರು, ಶಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖದೀಮರ ಬಂಧನಕ್ಕೆ ಶೋಧ ನಡೆಯುತ್ತಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

