ಅಪರಾಧ ಸುದ್ದಿ

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು, ಪತಿ ಮಕ್ಕಳ ಸ್ಥಿತಿ ಗಂಭೀರ

Share It

ನೆಲಮಂಗಲ: ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಮಾಗಡಿ ತಾಲೂಕಿನ ಲಕ್ಕೇನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಅಶ್ವಿನಿ ಎಂಬ 30 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಅಶ್ವಿನಿ ಪತಿ ಹಾಗೂ ಇಬ್ಬರು ಮಕ್ಕಳ ಜತೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪತಿ ಹಾಗೂ ಇಬ್ಬರು ಮಕ್ಕಳು ಮತ್ತು ಅಶ್ವಿನಿ ಗಂಭೀರವಾಗಿ ಗಾಯಗೊಂಡಿದ್ದರು. ಅವರೆಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಶ್ವಿನಿ ಸಾವನ್ನಪ್ಪಿದ್ದು, ಪತಿ ಹಾಗೂ ಮಕ್ಕಳ ಸ್ಥಿತಿ ಗಂಭೀರವಾಗಿದೆ.

ಮೃತ ಅಶ್ವಿನಿ ಕುಟುಂಬ ಮಾಗಡಿ ತಾಲೂಕಿನ ಕುದೂರು ಹೋಬಳಿಯ ತೊರೆ ಮೂಡಲಪಾಳ್ಯ ನಿವಾಸಿಗಳು ಎಂದು ಹೇಳಲಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page