ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದಲ್ಲಿ ನಡೆದಿದೆ.
೩೦ ವರ್ಷದ ಅಂಜುಮಾ ಕೊಲೆಯಾದ ದುರ್ದೈವಿ. ಆಕೆಯ ಪತಿ ಮೆಹಬೂಬ್ ಪಣಿಬಂದ್ ಎಂತಾತನೇ ಕೊಲೆ ಮಾಡಿರುವಾತ. ಈತ ತನ್ನ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕಪಡಿಸಿ, ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ.
ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಂಜುಮಾ ಹಾಗೂ ಮೆಹಬೂಬ್ ಈ ಇಬ್ಬರಿಗೂ ಇದು ಎರಡನೇ ಮದುವೆ ಎನ್ನಲಾಗಿದೆ. ಹೀಗಾಗಿ, ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಹೇಳಲಾಗಿದೆ.

