ಸುದ್ದಿ

ಒಂದೇ ದಿನ ನಮ್ಮ ಮೆಟ್ರೋಗೆ 3.8 ಕೋಟಿ ಆದಾಯ

Share It

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋಗೆ ಒಂದೇ ದಿನ3.8 ಕೋಟಿ ಹೆಚ್ಚುವರಿ ಆದಾಯ ಬಂದಿದೆ.

ಬುಧವಾರ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ 8.93 ಲಕ್ಷ ಜನರು ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ರಾತ್ರಿ 11 ಗಂಟೆಯ ನಂತರ 40,774 ಜನರ ಸಂಚಾರ ಮಾಡಿದ್ದಾರೆ. ಸಾಮಾನ್ಯ ದಿನಕ್ಕಿಂತ ಹೆಚ್ಚುವರಿಯಾಗಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ಮೆಟ್ರೋ ನಿಗಮದ ಎಂಡಿ ಯಶವಂತ ಚೌವ್ಹಾಣ್ ತಿಳಿಸಿದ್ದಾರೆ.

ಕ್ರಿಸ್‌ಮಸ್ ರಜೆಯ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿತ್ತು. ಸಾಮಾನ್ಯವಾಗಿ 7 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದು, ಅದು 6 ಲಕ್ಷಕ್ಕೆ ಇಳಿದಿತ್ತು.ಆದರೆ, ಹೊಸ ವರ್ಷಾಚರಣೆಯ ಕಾರಣದಿಂದ ಮತ್ತೇ ಏರಿಕೆಯಾಗಿ 3.8 ಕೋಟಿ ಆದಾಯವನ್ನು ಮೆಟ್ರೋ ಗಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Share It

You cannot copy content of this page