ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಫೋಟೋ ಶೂಟ್ ಮಾಡುವ ಮೂಲಕ ನೆನಪಿನಲ್ಲುಳಿಯುವಂತೆ ಮಾಡಲು ಹೋಗಿದ್ದ ಯುವಕನೊಬ್ಬ ಬೈಕ್ನಿಂದ ಬಿದ್ದು ಪ್ರಾಣಬಿಟ್ಟಿದ್ದಾನೆ.
ಧಾರವಾಡದ ಜನ್ನತ್ ನಗರದ ಮನೀಶ್ ಗುಡಿಸಲಮನಿ ಮೃತ ದುರ್ದೈವಿ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೀಶ್ ಧಾರವಾಡದ ಕಲಕೇರಿ ವೀವ್ ಪಾಯಿಂಟ್ಗೆ ಸ್ನೇಹಿತರೊಂದಿಗೆ ತೆರಳಿದ್ದ ಎನ್ನಲಾಗಿದೆ. ಅಲ್ಲಿಂದ ವಾಪಸ್ ಬರುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ಪ್ರಾಣಬಿಟ್ಟಿದ್ದಾನೆ.
ಫೋಟೋ ಶೂಟ್ ಮುಗಿಸಿಕೊಂಡು ವಾಪಸ್ ತೆರಳುವಾಗ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

