ಬೆಂಗಳೂರು: ಫೆ.23 ಕ್ಕೆ ಶ್ರೀ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಫೆ.23 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆ ಉದ್ಘಾಟನೆ ಮತ್ತು ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರ ಪಟ್ಟಾಭಿಷೇಕ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಅಂದು ಶ್ರೀಮಠದಿಂದ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

